Q & A for Students – August 2024

Q1: ನಾನು ಪದವಿ ಮುಗಿಸಿ ಮೂರು ವರ್ಷ ಆಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಿಗದೆ, ಈಗ ಬಿ.ಪಿಇಡಿ, ಬಿಇಡಿ, ಕಾನೂನು ಅಥವಾ ಎಂಕಾA ಕೋರ್ಸ್ಗಳಲ್ಲಿ ಯಾವ ಕೋರ್ಸ್ ಮಾಡಿದರೆ ಜೀವನವನ್ನು ಕಟ್ಟಿಕೊಳ್ಳಬಹುದು? ಈವರೆಗೆ, ಸಾಕಷ್ಟು ಸೋಲನ್ನು ಕಂಡಿದ್ದು ನಿಮ್ಮ ಮಾರ್ಗದರ್ಶನ ಬೇಕಿದೆ.

ಜೀವನದಲ್ಲಿ ಕನಸುಗಳಿರಬೇಕು; ಕನಸುಗಳು ಮಹತ್ವಾಕಾಂಕ್ಷೆಯಾಗಬೇಕು. ಅದರಂತೆ, ವೃತ್ತಿ ಮತ್ತು ವೈಯಕ್ತಿಕ ಜೀವನದಲ್ಲಿ ನಿರ್ದಿಷ್ಟವಾದ, ಸ್ಪಷ್ಟವಾದ, ಸಾಧಿಸಬಹುದಾದ, ಮತ್ತು ಅಳೆಯಬಹುದಾದ ಗುರಿಯಿರಬೇಕು. ಬಾಳಿಗೊಂದು ಗುರಿ ಇದ್ದರೆ, ನಮ್ಮಲ್ಲಿರುವ ಸುಪ್ತ ಶಕ್ತಿಗಳನ್ನು ಆ ಗುರಿಯೆಡೆಗೆ ಕೇಂದ್ರೀಕರಿಸಿ, ವೃತ್ತಿಯಲ್ಲಿ ಯಶಸ್ಸು ಮತ್ತು ಜೀವನದಲ್ಲಿ ಸಂತೃಪ್ತಿಯನ್ನು ಪಡೆಯಬಹುದು.

ನೀವು ತಿಳಿಸಿರುವ ಎಲ್ಲಾ ಕೋರ್ಸ್ ಆಯ್ಕೆಗಳಲ್ಲೂ ವೃತ್ತಿ ಜೀವನವನ್ನು ರೂಪಿಸಿಕೊಳ್ಳಬಹುದು. ಕಲಿಯುವ ವಿದ್ಯೆಗೂ, ನಿಮ್ಮಲ್ಲಿರುವ ಕೌಶಲಗಳಿಗೂ ಸರಿಹೊಂದುವAತ, ನಿಮ್ಮ ಇಷ್ಟ, ಅಭಿರುಚಿಗೆ ಸ್ಪಂದಿಸುವAತ ವೃತ್ತಿ, ಅದರಂತೆ ಕೋರ್ಸ್ ಆಯ್ಕೆ ಮಾಡಿಕೊಳ್ಳಿ. ಏಕೆಂದರೆ, ಒಲವಿಲ್ಲದ ವೃತ್ತಿ ನೀರಸಮಯ; ಅಂತಹ ವೃತ್ತಿಯಲ್ಲಿ ಯಶಸ್ಸು ಅಸಾಧ್ಯ. ಹೆಚ್ಚಿನ ಮಾರ್ಗದರ್ಶನಕ್ಕಾಗಿ ಈ ವಿಡಿಯೊ ವೀಕ್ಷಿಸಿ ಮತ್ತು ಅಗತ್ಯವೆನಿಸಿದರೆ ವೃತ್ತಿ ಸಲಹೆಗಾರರನ್ನು ಸಂಪರ್ಕಿಸಿ: https://www.youtube.com/watch?v=AwlDno1YduQ

Q2: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಹೇಗೆ ಮಾಡಬೇಕು?

ಪರೀಕ್ಷೆಗಳ ಪ್ರಾಮುಖ್ಯತೆ, ಕಠಿಣತೆಯ ಮಟ್ಟ ಹಾಗೂ ನಿಮ್ಮ ಧ್ಯೇಯ ಮತ್ತು ಸಾಮರ್ಥ್ಯದ ಆಧಾರದ ಮೇಲೆ ಸೂಕ್ತ ಕಾರ್ಯತಂತ್ರವನ್ನು ರೂಪಿಸಬೇಕು. ಎಷ್ಟು ಸಮಯ ಓದಬೇಕು ಎನ್ನುವುದಕ್ಕಿಂತ ಓದುವಿಕೆ ಪರಿಣಾಮಕಾರಿಯಾಗಿರಬೇಕು.   ಅದೇ ರೀತಿ ಸ್ವಯಂ-ಪ್ರಶ್ನೆಗಳನ್ನು ಕೇಳುವುದರಿಂದ ವಿಷಯದ ಬಗ್ಗೆ ಒಳನೋಟಗಳು ಲಭಿಸಿ, ನಿಮ್ಮಲ್ಲಿ ವಿಮರ್ಶಾತ್ಮಕ ಚಿಂತನಾ ಕೌಶಲ್ಯದ ಅಭಿವೃದ್ಧಿಯಾಗಿ ಕಲಿಕೆ ಪರಿಪೂರ್ಣವಾಗುತ್ತದೆ.  ಹಾಗೂ, ಈ ಸಲಹೆಗಳನ್ನು ಗಮನಿಸಿ:

  • Sಕಿ೩ಖ ನಂತಹ ಓದುವಿಕೆಯ ತಂತ್ರಗಾರಿಕೆ ಉಪಯುಕ್ತ.
  • ಹಿಂದಿನ ಪ್ರಶ್ನೆಪತ್ರಿಕೆಗಳನ್ನು ಗಮನಿಸಿ ಅಣಕು ಪರೀಕ್ಷೆಗಳನ್ನು ಮಾಡುತ್ತಿರಿ.
  • ಮನಸ್ಸು ಉಲ್ಲಾಸವಾಗಿರುವಾಗ, ಕಠಿಣ ವಿಷಯಗಳು ಮತ್ತು ಕಡಿಮೆ ಆಸಕ್ತಿಯಿರುವ ವಿಷಯಗಳನ್ನು ಓದಿ.
  • ದಿನನಿತ್ಯದ ಅಧ್ಯಯನ ವೇಳಾಪಟ್ಟಿಯನ್ನು ಪಾಲಿಸಿ.
  • ಆದಷ್ಟು ಶಾಂತ ವಾತಾವರಣದಲ್ಲಿ ಏಕಾಗ್ರತೆಯಿಂದ ಓದಿ.
  • ಏಕಾಗ್ರತೆ ಮತ್ತು ಸ್ಮರಣಶಕ್ತಿಯನ್ನು ಹೆಚ್ಚಿಸುವ ಭ್ರಮರಿ ಪ್ರಾಣಾಯಾಮವನ್ನು ದಿನಕ್ಕೆ ೨-೩ ಬಾರಿ ಅಭ್ಯಾಸ ಮಾಡಿ.
  • ಆಗಾಗ್ಗೆ ಸಣ್ಣ ವಿರಾಮಗಳನ್ನು ತೆಗೆದುಕೊಳ್ಳಿ.

ಪರಿಣಾಮಕಾರಿ ಅದ್ಯಯನದ ಮಾರ್ಗದರ್ಶನಕ್ಕಾಗಿ ಈ ವಿಡಿಯೊ ವೀಕ್ಷಿಸಿ: https://www.youtube.com/watch?v=3PzmKRaJHmk

Q3: ನಾನು ಜೀವವಿಜ್ಞಾನದಲ್ಲಿ ಪದವಿಯನ್ನು ಮಾಡಿದ್ದು ನನಗೆ ಇಂಟೀರಿಯರ್ ಡಿಸೈನ್ ಕ್ಷೇತ್ರದಲ್ಲಿ ಆಸಕ್ತಿ¬ದ್ದು, ನಿಮ್ಮ ಮಾರ್ಗದರ್ಶನವನ್ನು ನೀಡಿ.

ಇಂಟೀರಿಯರ್ ಡಿಸೈನ್ ಕ್ಷೇತ್ರದಲ್ಲಿ ಯಶಸ್ವಿಯಾಗಲು ಸೃಜನಶೀಲತೆ, ಕಲ್ಪನಾ ಶಕ್ತಿ, ಸಮಸ್ಯೆಗಳನ್ನು ಪರಿಹರಿಸುವ ಶಕ್ತಿ, ಸಂವಹನ, ವಿವರಗಳಿಗೆ ಗಮನ, ಸಮಯದ ನಿರ್ವಹಣೆ, ಆಟೋಕ್ಯಾಡ್ ಮುಂತಾದ ಕೌಶಲಗಳ ಅಗತ್ಯವಿರುತ್ತದೆ. ಹಾಗಾಗಿ, ಈ ಕೌಶಲಗಳು ನಿಮ್ಮಲ್ಲಿವೆಯೇ ಅಥವಾ ಈ ಕೌಶಲಗಳನ್ನು ಬೆಳೆಸಿಕೊಳ್ಳಬಹುದೇ ಎಂದು ಆಲೋಚಿಸಿ. ಹಾಗೂ, ಈ ಕ್ಷೇತ್ರಕ್ಕೆ ಸಂಬAಧಿಸಿದAತೆ ಪದವಿ (ಬಿ.ಡಿಸೈನ್) ಅಥವಾ ಅಲ್ಪಾವಧಿ ಸರ್ಟಿಫಿಕೆಟ್/ಡಿಪ್ಲೊಮಾ ಕೋರ್ಸ್ ಮಾಡಿ ಬೇಡಿಕೆಯಲ್ಲಿರುವ ಈ ಕ್ಷೇತ್ರದಲ್ಲಿ ಜೀವನವನ್ನು ರೂಪಿಸಿಕೊಳ್ಳಬಹುದು.

Q4: ನಾನು ದ್ವಿತೀಯ ಪಿಯುಸಿ ಮಾಡುತ್ತಿದ್ದು ಮುಂದೆ ಆಹಾರ ತಂತ್ರಜ್ಞಾನ ಕ್ಷೇತ್ರದಲ್ಲಿ ಯಾವ ಕೋರ್ಸ್ ಮಾಡಬಹುದು? ಉದ್ಯೋಗಾವಕಾಶಗಳೇನು?

ಜೀವನ ಶೈಲಿ ಮತ್ತು ಅಗತ್ಯಗಳು ಬದಲಾಗಿರುವ ಈ ಕಾಲಘಟ್ಟದಲ್ಲಿ ಸಿದ್ದಪಡಿಸಿದ ಆಹಾರ ಪದಾರ್ಥಗಳಿಗೆ ಹೆಚ್ಚಿನ ಬೇಡಿಕೆಯಿದ್ದು ಆಹಾರ ವಿಜ್ಞಾನ ಮತ್ತು ಪುಷ್ಟಿ ವಿಜ್ಞಾನ (ನ್ಯೂಟ್ರಿಷನ್) ಮುಂಚೂಣಿಯಲ್ಲಿದೆ. ಕಚ್ಛಾ ಧಾನ್ಯಗಳು ಮತ್ತು ಇನ್ನಿತರ ಆಹಾರ ಪದಾರ್ಥಗಳ ಶುದ್ದೀಕರಣ, ಸಂಸ್ಕರಣೆ, ಸುರಕ್ಷತೆ ಮತ್ತು ಸೂಕ್ತ ಪ್ಯಾಕಿಂಗ್ ನಂತರ ಬಳಕೆಗೆ ಯೋಗ್ಯ ರೀತಿಯಲ್ಲಿ ಸಿದ್ದಪಡಿಸುವ ಕಾರ್ಯಗಳಲ್ಲಿ ಆಹಾರ ವಿಜ್ಞಾನ, ಪ್ರಮುಖ ಪಾತ್ರವಹಿಸುತ್ತದೆ. ಹಾಗಾಗಿ, ಈ ಕ್ಷೇತ್ರದಲ್ಲಿ ಆಸಕ್ತಿಯಿದ್ದಲ್ಲಿ, ಬಿಏಸ್ಸಿ/ಬಿಟೆಕ್-ಫುಡ್ ಟೆಕ್ನಾಲಜಿ  ಕೋರ್ಸ್ ಮಾಡಬಹುದು.  ಈ ಕೋರ್ಸ್ ನಂತರ, ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದ ಆಹಾರ ಪದಾರ್ಥ ಮತ್ತು ಪಾನೀಯ ತಯಾರಿಕಾ ಉದ್ದಿಮೆಗಳು, ಆಹಾರ ಸಂಬAಧಿತ ( ಸಂರಕ್ಷಕಗಳು, ಬಣ್ಣಗಳು ಮತ್ತು ಸ್ವಾದಗಳು ಇತ್ಯಾದಿ) ಉದ್ದಿಮೆಗಳು, ಕೃಷಿ ಉದ್ದಿಮೆಗಳು, ಸಾವಯವ ಉದ್ದಿಮೆಗಳು, ಹೋಟೆಲ್ಸ್ ಮತ್ತು ರೆಸ್ಟೋರೆಂಟ್ಸ್, ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು, ಸಂಶೋಧನಾ ಸಂಸ್ಥೆಗಳು, ಆಹಾರ ಪರೀಕ್ಷಾ ಪ್ರಯೋಗಾಲಯಗಳು ಸೇರಿದಂತೆ ವಿಪುಲವಾದ ಉದ್ಯೋಗಾವಕಾಶಗಳಿವೆ. ಹೆಚ್ಚಿನ ತಜ್ಞತೆಗಾಗಿ, ಎಂಎಸ್ಸಿ/ಎಂಟೆಕ್ ಮಾಡಬಹುದು.

Q5: ನಾನು ದ್ವಿತೀಯ ಪಿಯುಸಿ ಮುಗಿಸಿದ್ದು, ಬಿಟೆಕ್ ಕೋರ್ಸ್ನ ವಿಭಾಗವನ್ನು ಆಯ್ಕೆ ಮಾಡುವುದರಲ್ಲಿ ಗೊಂದಲವಿದೆ. ದಯವಿಟ್ಟು ಮಾರ್ಗದರ್ಶನ ನೀಡಿ.

ಎಂಜಿನಿಯರಿAಗ್ ಕೋರ್ಸಿನಲ್ಲಿ ೫೫ಕ್ಕೂ ಹೆಚ್ಚು ವಿಭಾಗಗಳಿವೆ. ಯಾವುದೇ ವಿಭಾಗವಾದರೂ ಸಹ,  ಕೋರ್ಸ್ ಫಲಿತಾಂಶ  ಉತ್ಕöÈಷ್ಟವಾಗಿದ್ದರೆ ಬೇಡಿಕೆ ಇದೆ. ಕಂಪ್ಯೂಟರ್ ಸೈನ್ಸ್, ಐಟಿ, ರೊಬಾಟಿಕ್ಸ್, ಆರ್ಟಿಫಿಷಿಯಲ್ ಇಂಟಲಿಜೆನ್ಸ್, ಸೈಬರ್ ಸೆಕ್ಯೂರಿಟಿ,  ಎಲೆಕ್ಟಾçನಿಕ್ಸ್ ಅಂಡ್ ಕಮ್ಯೂನಿಕೇಷನ್, ಎಲೆಕ್ಟಿçಕಲ್, ಬಯೋಟೆಕ್ನಾಲಜಿ, ಮೆಕ್ಯಾನಿಕಲ್ ಇತ್ಯಾದಿ ಕೋರ್ಸ್ಗಳಿಗೆ ಬೇಡಿಕೆ ಇದೆ.

ಎಂಜಿನಿಯರಿAಗ್ ಕೋರ್ಸ್ ಮಾಡಲು ತಾರ್ಕಿಕ ಪ್ರತಿಪಾದನಾ ಕೌಶಲ, ಸಮಸ್ಯೆಗಳಿಗೆ ಪರಿಹಾರ, ಯೋಜನೆಯ ನಿರ್ವಹಣೆ ಮತ್ತು ವಿಶ್ಲೇಷಣಾ ಕೌಶಲಗಳ ಜೊತೆಗೆ ಆಯಾ ವಿಭಾಗಗಳ ವಿಷಯಗಳಲ್ಲಿ ಆಸಕ್ತಿ ಮತ್ತು ಸ್ವಾಭಾವಿಕ ಪ್ರತಿಭೆ ಇರಬೇಕು. ಹಾಗೂ, ವೃತ್ತಿಯೋಜನೆಯಂತೆ ಎಲ್ಲಿಯವರೆಗೆ ಓದಬೇಕೆನ್ನುವ ಗುರಿಯಿರಬೇಕು. ಹೆಚ್ಚಿನ ಮಾರ್ಗದರ್ಶನಕ್ಕಾಗಿ ಈ ವಿಡಿಯೊ ವೀಕ್ಷಿಸಿ: https://www.youtube.com/channel/UCH-ugIg9bBIyH5QQbn_JjIw