Q1: ಸರ್, ನಾನು ಪಿಯುಸಿ ಮಾಡುತ್ತಿದ್ದು ಮುಂದೆ ಬಿಟೆಕ್ (ಆಹಾರ ತಂತ್ರಜ್ಞಾನ) ಮಾಡಬೇಕು. ಈ ಕೋರ್ಸ್ ಮಾಹಿತಿ, ನಂತರದ ಅವಕಾಶಗಳೇನು?
ಬೆಳೆಯುತ್ತಿರುವ ಜನಸಂಖ್ಯೆ, ಹೆಚ್ಚುತ್ತಿರುವ ನಗರೀಕರಣ, ಬದಲಾಗುತ್ತಿರುವ ಜೀವನ ಶೈಲಿ ಇತ್ಯಾದಿ ಕಾರಣಗಳಿಂದ ಆಹಾರ ಸಂಸ್ಕರಣಾ ಕ್ಷೇತ್ರ ಅಭಿವೃದ್ಧಿಯ ಪಥದಲ್ಲಿದೆ. ಕಚ್ಛಾ ಧಾನ್ಯಗಳು ಮತ್ತು ಇನ್ನಿತರ ಆಹಾರ ಪದಾರ್ಥಗಳ ಸಂಗ್ರಹಣೆ, ಶುದ್ಧೀಕರಣ, ಸಂಸ್ಕರಣೆ, ಸುರಕ್ಷತೆ ಮತ್ತು ಸೂಕ್ತ ಪ್ಯಾಕಿಂಗ್ ನಂತರ ಬಳಕೆಗೆ ಯೋಗ್ಯ ರೀತಿಯಲ್ಲಿ ಸಿದ್ದಪಡಿಸುವ ಕಾರ್ಯಗಳಲ್ಲಿ ಆಹಾರ ತಂತ್ರಜ್ಞಾನ ಪ್ರಮುಖ ಪಾತ್ರವಹಿಸುತ್ತದೆ. ಆದ್ದರಿಂದ, ಆಹಾರ ತಂತ್ರಜ್ಞಾನ ಕ್ಷೇತ್ರದ ಪದವೀಧರರಿಗೂ ಹೆಚ್ಚಿನ ಬೇಡಿಕೆಯಿದೆ. ಹಾಗಾಗಿ, ಈ ಕ್ಷೇತ್ರದಲ್ಲಿ ಆಸಕ್ತಿಯಿದ್ದರೆ, ಬಿಟೆಕ್ (ಆಹಾರ ತಂತ್ರಜ್ಞಾನ) ಕೋರ್ಸ್ ಮಾಡಿ, ವೃತ್ತಿಜೀವನವನ್ನು ರೂಪಿಸಿಕೊಳ್ಳಬಹುದು.
ಈ ಕೋರ್ಸ್ ನಂತರ, ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದ ಆಹಾರ ಪದಾರ್ಥ ಮತ್ತು ಪಾನೀಯ ತಯಾರಿಕಾ ಉದ್ದಿಮೆಗಳು, ಆಹಾರ ಸಂಬಂಧಿತ (ಕೃತಕ ಮತ್ತು ನೈಸರ್ಗಿಕ ಸಂರಕ್ಷಕಗಳು, ಬಣ್ಣಗಳು, ಸ್ವಾದಗಳು ಇತ್ಯಾದಿ) ಉದ್ದಿಮೆಗಳು, ಕೃಷಿ ಉದ್ದಿಮೆಗಳು, ಸಾವಯವ ಉದ್ದಿಮೆಗಳು, ಹೋಟೆಲ್ಸ್ ಮತ್ತು ರೆಸ್ಟೋರೆಂಟ್ಸ್, ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು, ಫಾರ್ಮಾ ಉದ್ದಿಮೆಗಳು, ಸಂಶೋಧನಾ ಸಂಸ್ಥೆಗಳು, ಆಹಾರ ಪರೀಕ್ಷಾ ಪ್ರಯೋಗಾಲಯಗಳು ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ವಿಪುಲವಾದ ಉದ್ಯೋಗಾವಕಾಶಗಳಿವೆ. ಬಿಟೆಕ್ ನಂತರ ಎಂಟೆಕ್ ಮಾಡಿ, ಈ ಕ್ಷೇತ್ರದಲ್ಲಿ ಹೆಚ್ಚಿನ ತಜ್ಞತೆಯನ್ನು ಪಡೆಯಬಹುದು. ವೃತ್ತಿಯ ಅನುಭವದ ನಂತರ ಸ್ವಂತ ಉದ್ದಿಮೆಯನ್ನೂ ಪ್ರಾರಂಭಿಸಬಹುದು. ಹೆಚ್ಚಿನ ಮಾರ್ಗದರ್ಶನಕ್ಕಾಗಿ ಈ ವಿಡಿಯೊ ವೀಕ್ಷಿಸಿ: https://www.youtube.com/watch?v=r6vHcwlCiY8
Q2: ನನ್ನ ಮಗ ಮೊದಲ ವರ್ಷದ ಪಿಯುಸಿ (ಪಿಸಿಎಂಇ) ಓದುತ್ತಿದ್ದು, ದ್ವಿತೀಯ ಪಿಯುಸಿ ನಂತರ, ಯಾವ ಕೋರ್ಸ್ಗೆ ಹೆಚ್ಚಿನ ಉದ್ಯೋಗಾವಕಾಶಗಳಿವೆ?
ಪಿಯುಸಿ ನಂತರದ ಕೋರ್ಸ್ ಆಯ್ಕೆಗಳಲ್ಲಿ ಈಗ ವಿಪುಲತೆಯೂ ವೈವಿಧ್ಯತೆಯೂ ಇದೆ. ಯಾವುದೇ ಕೋರ್ಸ್ನ ಫಲಿತಾಂಶ ಉತ್ಕöÈಷ್ಟವಾಗಿದ್ದರೆ ಆಕರ್ಷಕವಾದ ಉದ್ಯೋಗಾವಕಾಶಗಳಿವೆ. ಹಾಗಾಗಿ, ವಿದ್ಯಾರ್ಥಿಗಳ ಆಸಕ್ತಿ, ಅಭಿರುಚಿ ಮತ್ತು ಸ್ವಾಭಾವಿಕ ಪ್ರತಿಭೆಯಂತೆ ವೃತ್ತಿಯೋಜನೆಯನ್ನು ಮಾಡಿ ಅದಕ್ಕೆ ಅನುಗುಣವಾಗಿ ಕೋರ್ಸ್ ಆಯ್ಕೆ ಮಾಡುವುದು ಸೂಕ್ತ.. ಹೆಚ್ಚಿನ ಮಾರ್ಗದರ್ಶನಕ್ಕಾಗಿ ಈ ವಿಡಿಯೊ ವೀಕ್ಷಿಸಿ: https://www.youtube.com/watch?v=AwlDno1YduQ
Q3: ಈ ವರ್ಷದ ನೀಟ್ ಪರೀಕ್ಷೆಯಲ್ಲಿ ನಿರೀಕ್ಷಿಸಿದಷ್ಟು ಫಲಿತಾಂಶ ಬರದೆ ಮೆಡಿಕಲ್ ಸೀಟ್ ಸಿಗಲಿಲ್ಲ. ಆದ್ದರಿಂದ, ಮುಂದಿನ ವರ್ಷದ ನೀಟ್ ಪರೀಕ್ಷೆಗೆ ತಯಾರಾಗುತ್ತಿದ್ದೇನೆ. ಈ ನಿರ್ಧಾರ ಸರಿಯೇ? ಓದಿದ್ದನ್ನು ಜ್ಞಾಪಕದಲ್ಲಿಟ್ಟುಕೊಳ್ಳುವುದು ಹೇಗೆ?
ವೈದ್ಯರಾಗಬೇಕೆನ್ನುವ ಗುರಿಯಿಂದ ವಿಚಲಿತರಾಗದೆ, ಅಲ್ಪ ವಿರಾಮದ ಮೂಲಕ ಇನ್ನೂ ಹೆಚ್ಚಿನ ಪರಿಶ್ರಮ ಮತ್ತು ಕಾರ್ಯತಂತ್ರದಿಂದ ಮುಂದಿನ ನೀಟ್ ಪರೀಕ್ಷೆಗೆ ತಯಾರಾಗುವ ನಿಮ್ಮ ನಿರ್ಧಾರ ಸರಿಯಾಗಿದೆ. ಓದಿದ್ದು ಜ್ಞಾಪಕದಲ್ಲಿರಬೇಕಾದರೆ ಈ ಸಲಹೆಗಳನ್ನು ಅನುಸರಿಸಿ:
• ತರಗತಿಯಲ್ಲಿ ಭೋಧಿಸುವ ವಿಷಯ ಅರ್ಥವಾಗದಿದ್ದರೆ ಸಂಕೋಚವಿಲ್ಲದೆ ಪ್ರಶ್ನೆಗಳನ್ನು ಕೇಳಬೇಕು. ಏಕೆಂದರೆ, ಪ್ರಶ್ನೆಗಳನ್ನು ಕೇಳುವುದರಿಂದ ವಿಮರ್ಶಾತ್ಮಕ ಚಿಂತನಾ ಕೌಶಲ್ಯಗಳ ಅಭಿವೃದ್ಧಿಯ ಜೊತೆಗೆ, ವಿಷಯದ ಬಗ್ಗೆ ಒಳನೋಟಗಳು ಲಭಿಸಿ ಕಲಿಕೆ ಪರಿಣಾಮಕಾರಿಯಾಗುತ್ತದೆ.
• ತರಗತಿಯಲ್ಲಿ ಪರಿಣಾಮಕಾರಿಯಾಗಿ ಟಿಪ್ಪಣಿ (ನೋಟ್ಸ್) ಬರೆಯುವುದರಿಂದ ಕಲಿಕೆಯ ಸಾಮರ್ಥ್ಯ ಹೆಚ್ಚುತ್ತದೆ ಮತ್ತು ಆತ್ಮವಿಶ್ವಾಸ ಬೆಳೆಯುತ್ತದೆ.
• ಪರಿಣಾಮಕಾರಿ ಓದುವಿಕೆಯ ಕಲೆಯನ್ನು ಎಸ್ಕ್ಯು೩ಆರ್ (Sಕಿ೩ಖ) ನಂತಹ ತಂತ್ರಗಾರಿಕೆಯ ಮೂಲಕ ರೂಢಿಸಿಕೊಳ್ಳಿ. ಇದರಿಂದ, ಜ್ಞಾಪಕ ಶಕ್ತಿಯೂ ವೃದ್ಧಿಸುತ್ತದೆ.
ಹೆಚ್ಚಿನ ಮಾರ್ಗದರ್ಶನಕ್ಕಾಗಿ ಈ ವಿಡಿಯೋಗಳನ್ನು ವೀಕ್ಷಿಸಿ:
https://www.youtube.com/watch?v=3PzmKRaJHmk
https://www.youtube.com/watch?v=Y2IPeZ6lbeM
Q3: ನಾನು ಈಗಷ್ಟೇ ಬಿಎ ಪದವಿಗೆ ಸೇರಿರುವ ಗ್ರಾಮೀಣ ಭಾಗದ ವಿದ್ಯಾರ್ಥಿ. ಮುಂದೆ, ಎಂಬಿಎ ಮಾಡುವ ಯೋಜನೆಯಿದೆ. ಆದರೆ, ಇಂಗ್ಲಿಷ್ ಮಾತನಾಡುವುದರಲ್ಲಿ ಸಮಸ್ಯೆಯಿದೆ. ಸುಲಲಿತವಾಗಿ ಇಂಗ್ಲಿಷ್ ಮಾತನಾಡುವುದು ಮತ್ತು ಕಲಿಯುವುದು ಹೇಗೆ?
ಇಂಗ್ಲಿಷ್ ಭಾಷೆ ಕಬ್ಬಿಣದ ಕಡಲೆಯಲ್ಲ; ನಿಮ್ಮ ಅಗತ್ಯಕ್ಕೆ ತಕ್ಕಂತೆ ಸೂಕ್ತವಾದ ಕಾರ್ಯತಂತ್ರ ಮತ್ತು ಪರಿಶ್ರಮವಿದ್ದಲ್ಲಿ, ಇಂಗ್ಲಿಷ್ ಕಲಿಯಬಹುದು. ಮೊದಲಿಗೆ, ಈ ಸಲಹೆಗಳನ್ನು ಅನುಸರಿಸಿ:
- ಆತ್ಮವಿಶ್ವಾಸ: ಇಂಗ್ಲಿಷ್ ಭಾಷೆಯನ್ನು ಕಲಿಯುವಾಗ ಹಿಂಜರಿಕೆಯಿಲ್ಲದೆ, ಆತ್ಮವಿಶ್ವಾಸದಿಂದ ಪ್ರಾರಂಭಿಸಿ.
- ಓದುವುದು: ಇಂಗ್ಲಿಷ್ ವಾರ್ತಾಪತ್ರಿಕೆಗಳನ್ನು, ಪುಸ್ತಕಗಳನ್ನು, ಲೇಖನಗಳನ್ನು ದಿನನಿತ್ಯ ಓದಿ. ಪದಬಳಕೆ, ವಾಕ್ಯ ರಚನೆ, ವ್ಯಾಕರಣವನ್ನು ಗಮನಿಸಿ. ಸಾಧ್ಯವಾದರೆ, ಉಚ್ಛಾರಣೆಗೆ ಸಹಾಯವಾಗುವಂತೆ ಜೋರಾಗಿ ಓದಿ. ಅರ್ಥವಾಗದ ಪದಗಳನ್ನು ನಿಘಂಟಿನ ಮೂಲಕ ಅರ್ಥೈಸಿಕೊಳ್ಳಿ.
- ಮಾತನಾಡುವುದು: ಆತ್ಮೀಯರೊಂದಿಗೆ ಸರಳವಾದ ವಿಷಯಗಳನ್ನು ಮಾತನಾಡಲು ಪ್ರಯತ್ನಿಸಿ. ತಪ್ಪು-ಒಪ್ಪುಗಳಾದಲ್ಲಿ, ಸಂಕೋಚವಿಲ್ಲದೆ ಪ್ರಯತ್ನವನ್ನು ಮುಂದುವರೆಸಿ. ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಲು, ಕನ್ನಡಿಯ ಮುಂದೆ ಆಂಗಿಕ ಭಾಷೆಯನ್ನು ಬಳಸಿ ಮಾತನಾಡಿ.
- ವಿಡಿಯೊ, ಚಲನಚಿತ್ರಗಳ ವೀಕ್ಷಣೆ: ಕನ್ನಡದ ಉಪಶೀರ್ಷಿಕೆಗಳಿರುವ ಇಂಗ್ಲಿಷ್ ಚಲನಚಿತ್ರಗಳು, ಟಿವಿ ಕಾರ್ಯಕ್ರಮಗಳು, ಸಾಕ್ಷ÷್ಯಚಿತ್ರಗಳನ್ನು ವೀಕ್ಷಿಸಿ. ಅದೇ ರೀತಿ, ಯೂಟ್ಯೂಬ್ನಲ್ಲಿ ಇಂಗ್ಲಿಷ್ ಕಲಿಕೆಗೆ ನೆರವಾಗುವ ವಿಡಿಯೋಗಳನ್ನು ವೀಕ್ಷಿಸಿ. ಹಾಗೆಯೇ, ಸಾಧಕರ ಭಾಷಣಗಳನ್ನು ಕೇಳುವುದರಿಂದ ಪ್ರೇರೇಪಿತರಾಗುವುದರ ಜೊತೆಗೆ ಇಂಗ್ಲಿಷ್ ಕಲಿಯುವಿಕೆಗೆ ಸಹಾಯವಾಗುತ್ತದೆ.
- ಮೊಬೈಲ್ ಅಪ್ಲಿಕೇಶನ್ಸ್ ಬಳಕೆ: ಇಂಗ್ಲಿಷ್ ಕಲಿಕೆಗೆ ಅನುಕೂಲವಾಗುವ ಹಲವಾರು ಮೊಬೈಲ್ ಅಪ್ಲಿಕೇಶನ್ಸ್ಗಳಿವೆ (ಹೆಲೊ ಇಂಗ್ಲಿಷ್, ಡ್ಯುಒಲಿಂಗೊ, ಹೆಲೊ ಟಾಕ್ ಇತ್ಯಾದಿ). ಇವುಗಳನ್ನು ಬಳಸಿ.
- ಈ ಸಲಹೆಗಳನ್ನು ನಿರಂತರವಾಗಿ ಕೆಲವು ತಿಂಗಳ ಕಾಲ ಅನುಸರಿಸಿದ ನಂತರ ನಿಮ್ಮ ಇಂಗ್ಲಿಷ್ ಕಲಿಕೆ ಒಂದು ಹಂತಕ್ಕೆ ತಲುಪುತ್ತದೆ. ಹೆಚ್ಚಿನ ಮಾರ್ಗದರ್ಶನಕ್ಕಾಗಿ ಈ ವಿಡಿಯೊ ವೀಕ್ಷಿಸಿ: https://www.youtube.com/watch?v=NoFcIQAFDCA
Q4: ನಾನು ಬಿಕಾಂ ಪದವಿ ಮಾಡುತ್ತಿದ್ದು, ಮುಂದೆ ಬಿ.ಇಡಿ ಮಾಡಿ ಶಿಕ್ಷಕಿಯಾಗಬೇಕು. ಬಿ.ಇಡಿ ಕೋರ್ಸ್ನಲ್ಲಿ ಕಲಾ ವಿಭಾಗದ ವಿಷಯವನ್ನು ತೆಗೆದುಕೊಳ್ಳಬಹುದೇ?
ನಮಗಿರುವ ಮಾಹಿತಿಯಂತೆ, ಬಿ.ಇಡಿ ಕೋರ್ಸ್ನಲ್ಲಿ ಆಯ್ಕೆ ಮಾಡಿಕೊಳ್ಳುವ ವಿಷಯಗಳನ್ನು ಪದವಿಯಲ್ಲಿ ಓದಿರಬೇಕು.
Q5: ನಾನು ದ್ವಿತೀಯ ಪಿಯುಸಿ ಓದುತ್ತಿದ್ದು ಮುಂದಿನ ಶಿಕ್ಷಣವನ್ನು ಅಮೇರಿಕ ದೇಶದಲ್ಲಿ ಮಾಡಿ ನಾಸಾ ಸಂಸ್ಥೆಯಲ್ಲಿ ಉದ್ಯೋಗವನ್ನು ಮಾಡುವ ಆಸೆಯಿದೆ. ನಿಮ್ಮ ಮಾರ್ಗದರ್ಶನ ನೀಡಿ.
ಪಿಯುಸಿ ಓದುತ್ತಿರುವಾಗಲೇ ಮುಂದಿನ ಭವಿಷ್ಯದ ಬಗ್ಗೆ ಸ್ಪಷ್ಟವಾದ ಯೋಜನೆಯಿರುವುದು ಶ್ಲಾಘನೀಯ. ಪಿಯುಸಿ ನಂತರ, ಏರೋಸ್ಪೇಸ್/ಏರೋನಾಟಿಕಲ್ ಎಂಜಿನಿಯರಿAಗ್ ಕೋರ್ಸನ್ನು ಇಲ್ಲಿನ ಪ್ರತಿಷ್ಠಿತ ಕಾಲೇಜುಗಳಲ್ಲಿ ಮಾಡಿ, ಸ್ನಾತಕೋತ್ತರ ಶಿಕ್ಷಣವನ್ನು ಅಮೇರಿಕ ದೇಶದಲ್ಲಿ ಮಾಡಬಹುದು.
ವಿದೇಶಿ ಶಿಕ್ಷಣಕ್ಕೆ ಅನೇಕ ಪೂರ್ವಸಿದ್ಧತೆಗಳಿರುತ್ತವೆ. ಉದಾಹರಣೆಗೆ, ಗ್ರಾಜುಯೇಟ್ ರೆಕಾರ್ಡ್ ಎಕ್ಸಾಮ್ (ಜಿಆರ್ಇ), ಇಂಗ್ಲಿಷ್ ಭಾಷಾ ಪ್ರೌಢಿಮೆ ಪರೀಕ್ಷೆ, ವಿಶ್ವವಿದ್ಯಾಲಯದ ಪ್ರವೇಶ ಪರೀಕ್ಷೆಗಳು, ವೀಸಾ ಪ್ರಕ್ರಿಯೆ, ಸ್ಕಾಲರ್ಶಿಪ್, ಹಾಸ್ಟೆಲ್ ಇತ್ಯಾದಿ ವಿಷಯಗಳಿಗೆ ಸಂಬAಧಿಸಿದ ಸಿದ್ಧತೆಗಳನ್ನು ನೀವು ಎರಡನೇ ವರ್ಷದ ಎಂಜಿನಿಯರಿAಗ್ ಮಾಡುವಾಗ ಪ್ರಾರಂಭಿಸಬಹುದು. ವೃತ್ತಿಯೋಜನೆಯ ಮಾರ್ಗದರ್ಶನಕ್ಕಾಗಿ ಈ ವಿಡಿಯೊ ವೀಕ್ಷಿಸಿ: https://www.youtube.com/watch?v=AwlDno1YduQ
Q6: ನಾನು ಈ ವರ್ಷ ಎಂಟೆಕ್ ಮುಗಿಸಿದ್ದು, ಮುಂದೇನು ಎನ್ನುವ ವಿಚಾರದಲ್ಲಿ ಗೊಂದಲವಿದೆ. ಯಾವ ಆಯ್ಕೆ ಸೂಕ್ತವಾಗಬಹುದು?
ನೀವು ಬಿ.ಟೆಕ್ ಯಾವ ವಿಭಾಗದಲ್ಲಿ ಮಾಡಿದ್ದೀರಿ ಎಂದು ತಿಳಿಸಿಲ್ಲ. ಎಂಟೆಕ್ ನಂತರ ವೃತ್ತಿ ಜೀವನವನ್ನು ರೂಪಿಸಿಕೊಳ್ಳಲು ಪ್ರಮುಖವಾಗಿ ಮೂರು ಆಯ್ಕೆಗಳಿವೆ. ಆದರೆ, ನಿಮ್ಮ ಸ್ವಾಭಾವಿಕ ಪ್ರತಿಭೆ, ಆಸಕ್ತಿ ಮತ್ತು ಒಲವಿರುವ ಕ್ಷೇತ್ರದಲ್ಲಿ ಭವಿಷ್ಯವನ್ನು ರೂಪಿಸಿಕೊಳ್ಳುವುದು ಸೂಕ್ತ.
- ಕಾರ್ಪೊರೇಟ್ ಸಂಸ್ಥೆಗಳಲ್ಲಿ ಉದ್ಯೋಗವನ್ನು ಅರಸಬಹುದು.
- ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನಿಮಗೆ ಒಲವಿರುವ ಸರ್ಕಾರಿ ಕ್ಷೇತ್ರದಲ್ಲಿ ಉದ್ಯೋಗವನ್ನು ಅರಸಬಹುದು.
- ಸಂಶೋಧನೆ/ಅಧ್ಯಾಪಕ ವೃತ್ತಿಯಲ್ಲಿ ಆಸಕ್ತಿಯಿದ್ದರೆ ಪಿಎಚ್ಡಿ ಮಾಡಬಹುದು.
ಪಿಎಚ್ಡಿ ಮಾಡುವ ಮಾರ್ಗದರ್ಶನಕ್ಕಾಗಿ ಈ ವಿಡಿಯೊ ವೀಕ್ಷಿಸಿ: https://www.youtube.com/watch?v=Mb4PKUb35_Q